ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!             

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ಎಂಬಲ್ಲಿ ಸಂಭವಿಸಿದೆ.

ಕೊಲೆಯಾದ ಬಾಲಕಿಯನ್ನು ಪ್ರಿಯಾಂಕಾ (10) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು ಸಹೋದರಿ ಮತ್ತು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು. ಇದರಿಂದ ಸುಮಾ ಕೆಲಸಕ್ಕೆ ಹೋಗುವುದು ಕಷ್ಟವಾಗಿತ್ತು. ಸಂಬಂಧಿಕರು ಹಾಗೂ ಸ್ಥಳೀಯರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸುಮಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ವೈದ್ಯರ ಸಲಹೆ ಪಡೆದು ಹೇಳಿಕೆ ಪಡೆಯಲಾಗುವುದು’ ಎಂದು ವರದಿ ತಿಳಿಸಿದೆ.

Also Read  ನಾಳೆ (ಅ.18) ಲೋಕಾಯುಕ್ತರಿಂದ ಜನಸಂಪರ್ಕ ಸಭೆ

 

 

 

error: Content is protected !!
Scroll to Top