(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ತೀವ್ರ ಗಾಯಗೊಂಡ ಘಟನೆ ಕೆದಂವಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಪರ್ಪುಂಜ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಇವರು ಕೆದಂಬಾಡಿ ಶಾಲೆಯ ಸ್ಮಾರ್ಟ್ ಕ್ಲಾಸ್ ಕೋಣೆಯ ವಯರಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಕೆಳಗಡೆ ಬಿದ್ದು ತಲೆಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
CIRCUIT,