ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಡಿ 21 : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಲಾಯಿಲ ಗ್ರಾಮದ ಕೊಯ್ಯರು ಕ್ರಾಸ್ ಬಳಿ ನಡೆದಿದೆ.

ಮೃತ ಯುವಕನನ್ನು ವಿಜಯ್ (25)  ಹಾಗೂ ಗಾಯಾಳುವನ್ನು ಶೈಲೇಶ್ ಎಂದು ಗುರುತಿಸಲಾಗಿದೆ. ಮೃತ ಯುವಕ ಉಜಿರೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top