ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 21. ಓಮ್ನಿ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿ ನಡೆದಿದೆ.

ಗಾಯಾಳುವನ್ನು ಕೊಯಿಲ ನಿವಾಸಿ ನಝೀರ್ ಎಂಬವರ ಪುತ್ರ ಉಬ್ಬಿ ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿಯಿಂದ ಕೆಮ್ಮಾರದ ಕಡೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

Scroll to Top