2 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಅನುದಾನ ನೀಡಿಲ್ಲ ➤ ಸಿಎಂ ಬೊಮ್ಮಾಯಿ       

(ನ್ಯೂಸ್ ಕಡಬ) newskadaba.com ವಿಧಾನಸಭೆ, ಡಿ. 21. ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಕಳೆದ ಎರಡು ವರ್ಷಗಳಿಂದ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ.

ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಿಗೆ ಸೌಲಭ್ಯ ಒದಗಿಸಲು 2018-19 ರಲ್ಲಿ 500 ಕೋಟಿ ರೂ., 2019-20 ರಲ್ಲಿ 500 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ನೀಡಲಾಗಿತ್ತು. ಆದರೆ ಕೊರೋನಾ ಕಾರಣಗಳಿಂದ ಎರಡು ವರ್ಷದಿಂದ ಅನುದಾನ ಬಿಡುಗಡೆ ಆಗಿರಲಿಲ್ಲ. ಇನ್ನು 2018-19, 2019-20 ನೇ ಸಾಲಿನಲ್ಲಿ ಮಂಜೂರಾಗಿರುವ ಅನುದಾನ ಬಿಡುಗಡೆಯೂ ಬಾಕಿ ಇದೆ ಎಂದು ಹೇಳಿದರು.

Also Read  ಬಳ್ಳಾರಿ ಪಾಲಿಕೆ ನೂತನ ಮೇಯರ್​ ಆಗಿ ತ್ರಿವೇಣಿ ಆಯ್ಕೆ   ➤ರಾಜ್ಯದ ಅತಿ ಕಿರಿಯ ಮೇಯರ್​ ಎಂಬ ಹೆಗ್ಗಳಿಕೆ

 

 

error: Content is protected !!
Scroll to Top