ಮಂಗಳೂರು: ಅಯ್ಯಪ್ಪಸ್ವಾಮಿ ವೃತಧಾರಿ ಬಾಲಕನ ಮೇಲೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಅಯ್ಯಪ್ಪ ವೃತಧಾರಿ ವಿದ್ಯಾರ್ಥಿಯೋರ್ವನಿಗೆ ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ನಗರದ ಶಾಲೆಯ ಬಳಿ ನಡೆದಿದೆ.

ನಗರದ ಶಾಲೆಯೊಂದರ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿದ್ದು, ಶಿಕ್ಷಕರು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆದರೆ ಮಂಗಳವಾರದಂದು ಮತ್ತೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು 9ನೇ ತರಗತಿ ವಿದ್ಯಾರ್ಥಿಗಳು 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಲ್ಲದೇ ಬಳಿಕ ಸಂಜೆ ವೇಳೆ ಶಾಲೆ ಬಿಟ್ಟು ಬಸ್‌ಗಾಗಿ ಕಾಯುತ್ತಿದ್ದ ಅದೇ ವಿದ್ಯಾರ್ಥಿಗೆ 9ನೇ ತರಗತಿ ಕೆಲವು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳೀಯರು ಆಗಮಿಸಿ ವಿದ್ಯಾರ್ಥಿಗಳನ್ನು ತಡೆದು, ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ನಡೆದ ಕೂಡಲೇ ಸ್ಥಳದಲ್ಲಿ ಯುವಕರು ಜಮಾಯಿಸಿದ್ದು, ಸ್ವಲ್ಪ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಬಳಿಕ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಈ ಕುರಿತು  ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮೊರಾರ್ಜಿ ವಸತಿ ಶಾಲೆಗಳ ಪ್ರವೇಶಾತಿ ಕೌನ್ಸಿಲಿಂಗ್

error: Content is protected !!
Scroll to Top