ಬೈಕ್ ಗೆ ಗೂಡ್ಸ್ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಸಂತೆಬೆನ್ನೂರು, ಡಿ. 21. ಗೂಡ್ಸ್ ವಾಹನಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂತೇಬೆನ್ನೂರು ಸಮೀಪದ ಕಾಕನೂರು ವಿನಾಯಕ ಪ್ರೌಢಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ದಾವಣಗೆರೆ ತಾಲ್ಲೂಕಿನ ಗೋಪನಾಳು ಗ್ರಾಮದ ನಿವಾಸಿ ಪರಮೇಶ್ (33) ಎಂದು ಗುರುತಿಸಲಾಗಿದೆ. ಇವರು ಪಾಂಡೋಮಟ್ಟಿ ಗ್ರಾಮಕ್ಕೆ ಸಂಬಂಧಿಕರ ಶವ ಸಂಸ್ಕಾರಕ್ಕೆಂದು ತೆರಳುವಾಗ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top