ಜನವರಿಯಲ್ಲಿ ಕರಾವಳಿ ಉತ್ಸವ ➤ ಡಾ.ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಮುಂಬರುವ 2023ರ ಜನವರಿ ಮಾಹೆಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.


ಈ ಕುರಿತು ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಕರಾವಳಿ ಉತ್ಸವದ ದಿನಾಂಕವನ್ನು ನಿಗದಿ ಪಡಿಸಲಾಗುವುದು, ಕರಾವಳಿ ಉತ್ಸವದ ಪೂರ್ವಭಾವಿ ಸಿದ್ಧತೆಗೆ ವಿವಿಧ ಸಮಿತಿಗಳು, ಉಪ ಸಮಿತಿಗಳನ್ನು ರಚಿಸಿ, ತಮ್ಮ ಹಂತದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಲು ಸೂಚಿಸಿದ ಅವರು, ಬೇಕಾದ ಅನುದಾನದ ಬಿಡುಗಡೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು. ಈ ಸಂರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ  ಮದನ್ ಮೋಹನ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಯವರು ಉಪಸ್ಥಿತರಿದ್ದರು.

Also Read  ನಾಳೆ (ಅ.18) ಲೋಕಾಯುಕ್ತರಿಂದ ಜನಸಂಪರ್ಕ ಸಭೆ

error: Content is protected !!
Scroll to Top