ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿಯವರಿಂದ ವಿತರಿಸಿರುವ ಗುರುತಿನ ಚೀಟಿಯನ್ನು ಸಮುದಾಯದ ಕೆಲವು ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ದುರುಪಯೋಗ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಈ ಹಿನ್ನಲೆ ಸಮಾಜದ ಹಿತದೃಷ್ಟಿಯಿಂದ ಆ ಗುರುತಿನ ಚೀಟಿಯನ್ನು ದುರುಪಯೋಗ ಮಾಡದಂತೆ ಹಾಗೂ ಮುಂದಿನ ದಿನಗಳಲ್ಲಿ ದುರುಪಯೋಗ ಮಾಡುವುದು ಕಂಡು ಬಂದಲ್ಲಿ ಗುರುತು ಚೀಟಿಯನ್ನು ರದ್ದುಪಡಿಸಲಾಗುವುದು. ಮಂಗಳೂರು ತಾಲೂಕಿನ ಸುತ್ತಮುತ್ತಲು ಮತ್ತು ವಿಶೇಷವಾಗಿ ಮಹಿಳೆಯರು ಲಿಂಗತ್ವ ಅಲ್ಪಸಂಖ್ಯಾತರಂತೆ ವರ್ತಿಸಿ ಜನರಿಂದ ಹಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡುತ್ತಿರುವುದು  ಗಮನಕ್ಕೆ ಬಂದಿದೆ. ಆದ್ದರಿಂದ  ಕೃತ್ಯಗಳನ್ನು ಮುಂದಿನ ದಿನಗಳಲ್ಲಿ ಮಾಡಿದರೆ ಅಂತಹಾ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Also Read  ಪತ್ರಕರ್ತರಿಗೆ ಆಹ್ವಾನ

 

error: Content is protected !!
Scroll to Top