ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 21. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ ಅಕ್ರಮ ತಳ್ಳುಗಾಡಿಯನ್ನು ತೆರವು ಮಾಡಿರುವುದಕ್ಕೆ ಪುತ್ತೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಮತ್ತು ಗ್ರಾ.ಪಂ ಪ್ರಭಾರ ಆಭಿವೃದ್ಧಿ ಅಧಿಕಾರಿ ನಾರಾಯಣ ಕೆ ಅವರಿಗೆ ವಾಟ್ಸಪ್ ಕರೆ ಮೂಲಕ ಜೀವ ಬೆದರಿಕೆಯೊಡ್ಡಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.

ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ ಅಬ್ದುಲ್ ರಜಾಕ್ ಬಿನ್ ಶೇಖಬ್ಬ ಎಂಬವರ ತಳ್ಳುಗಾಡಿಯನ್ನು ಪೊಲೀಸ್ ಬಂದೋಬಸ್ತ್ ಮೂಲಕ ನ.30ಕ್ಕೆ ತೆರವುಗೊಳಿಸಲಾಗಿತ್ತು. ಆದರೆ, ಡಿ.5ಕ್ಕೆ ಅನಾಮಧೇಯ ವ್ಯಕ್ತಿಯೊಬ್ಬರು ವಾಟ್ಸಪ್ ಕರೆ ಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಕೆ. ಮತ್ತು ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ತಳ್ಳುಗಾಡಿ ವ್ಯಾಪಾರಿಗೆ ಬೇರೆ ವ್ಯವಸ್ಥೆ ಮಾಡದಿದ್ದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ. ನಿನ್ನ ಹಾಗೂ ಇ.ಒ. ನವೀನ್ ಭಂಡಾರಿಯ ಮೊಬೈಲ್ ನಂಬರ್ ಹೊರ ದೇಶದಲ್ಲಿ ಎಲ್ಲರಲ್ಲೂ ಹರಿದಾಡುತ್ತಿದೆ. ಇದರಿಂದ ನಿಮ್ಮಿಬ್ಬರಿಗೆ ತೊಂದರೆಯಾಗಲಿದೆ ಎಂದು ಜೀವ ಬೆದರಿಕೆಯೊಡ್ಡಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Also Read  Derwent Mills Industrial Location

error: Content is protected !!
Scroll to Top