ಕುದ್ಮಾರು: ಡಿ.ಸಿ.ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಪ್ರಸ್ತಾವನೆ ► 15 ದಿನಗಳೊಳಗೆ ಸಾರ್ವಜನಿಕ ಅಭಿಪ್ರಾಯ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ನ.26. ಕುದ್ಮಾರು ಗ್ರಾಮದ ಸರ್ವೇ ನಂ. 167-3 ರಲ್ಲಿ 3.02 ಎಕರೆ ಡಿ.ಸಿ.ಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುವಂತೆ ಕಡಬ ಹೋಬಳಿಯ ಕಂದಾಯ ನಿರೀಕ್ಷಕರು ಪ್ರಸ್ತಾವನೆ ತಯಾರಿಸಿ ಉಲ್ಲೇಖ(2) ರಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ.

ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯಗಳೇನಾದರೂ ಇದ್ದಲ್ಲಿ 15 ದಿನಗಳ ಒಳಗಾಗಿ ಲಿಖಿತವಾಗಿ ಕಡಬ ವಿಶೇಷ ತಹಶಿಲ್ದಾರರ ಕಛೇರಿಗೆ ಸಲ್ಲಿಸುವಂತೆ ಈ ಮೂಲಕ ತಿಳಿಸಲಾಗಿದೆ. ನಿಗದಿತ ಸಮಯದೊಳಗೆ ಸಾರ್ವಜನಿಕರಿಂದ ಯಾವುದೇ ಅಭಿಪ್ರಾಯ ಬರದಿದ್ದಲ್ಲಿ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಇರುವುದಿಲ್ಲವೆಂದು ಪರಿಗಣಿಸಿ ಸದ್ರಿ ಡಿ.ಸಿ.ಮನ್ನಾ ಭೂಮಿಯನ್ನು ಅರ್ಹ ಪರಿಶಿಷ್ಟ ಜಾತಿ/ಪಂಗಡದವರಿಗೆ ಹಂಚಿಕೆ‌ಮಾಡಲು ಕ್ರಮ‌ ಕೈಗೊಳ್ಳಲಾಗುವುದು ಎಂದು ಕಡಬ ವಿಶೇಷ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಲುಷಿತ ನೀರು ಸೇವನೆ  ➤ ಮಹಿಳೆ ಮೃತ್ಯು

error: Content is protected !!
Scroll to Top