ಕೇರಳದಲ್ಲಿ ಹಕ್ಕಿ ಜ್ವರದ ಭೀತಿ ➤ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ!

(ನ್ಯೂಸ್ ಕಡಬ) newskadaba.com ಕೇರಳ, ಡಿ. 21. ಕೇರಳ ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಅನಾರೋಗ್ಯದ ಆತಂಕ ಮನೆ ಮಾಡಿದೆ. ಕೇರಳದ ಕೋಟಯಂ ಜಿಲ್ಲೆಯ ಎರಡು ಗ್ರಾಮಗಳ ನಿವಾಸಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

 

ಈ ರೋಗ ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಈ ಕುರಿತು ಯಾವುದೇ ಆತಂಕ ಬೇಡ. ಹಕ್ಕಿ ಜ್ವರ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯಾಧಿಕಾರಿಗಳು ಭರವಸೆ ನೀಡಿದ್ದಾರೆ.

Also Read  'ಭಾರತದಲ್ಲಿ ಮತ್ತೊಂದು ಏನೋ ಒಂದು ಮಹತ್ವದ್ದು ನಡೆಯಲಿದೆ..’ ಹಿಂಡನ್ ಬರ್ಗ್ ಹೇಳಿಕೆ..!              

 

error: Content is protected !!
Scroll to Top