ಡಿ. 24ರಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಜಿಲ್ಲಾಡಳಿತ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ(ರಿ), ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಡಿ. 24ರ ಶನಿವಾರ ಬೆಳಿಗ್ಗೆ 9.30ಕ್ಕೆ ರಾಷ್ಟ್ರೀಯ ಗ್ರಾಹಕ ದಿನಾಚಣೆ-2022 ಕಾರ್ಯಕ್ರಮವನ್ನು ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಗ್ರಾಹಕ ವ್ಯಾಜ್ಯ ವಿಲೇವಾರಿ ಆಯೋಗದ ಅಧ್ಯಕ್ಷ ಪ್ರಕಾಶ್ ಕೆ. ಕಾರ್ಯಕ್ರಮ ಉದ್ಘಾಟಿಸುವರು.

Also Read  ಪುತ್ತೂರು: ಮನೆಗೆ ನುಗ್ಗಿದ ಕಳ್ಳರು ➤ 96,000 ರೂ. ಮೌಲ್ಯದ ಚಿನ್ನಾಭರಣ ಕಳವು

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶೋಭಾ ಬಿ.ಜಿ., ಬೆಸೆಂಟ್ ಕಾಲೇಜಿನ ವೈಸ್ ಪ್ರೆಸಿಡೆಂಟ್ ಡಾ. ಮಂಜುಳಾ ಕೆ.ಟಿ ಹಾಗೂ ಪ್ರಾಂಶುಪಾಲರಾದ ಡಾ. ಸತೀಶ್ ಕುಮಾರ್ ಶೆಟ್ಟಿ ಪಿ. ಭಾಗವಹಿಸಲಿರುವರು.

 

error: Content is protected !!
Scroll to Top