ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ – News Kadaba

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ನಗರದ ಉರ್ವಸ್ಟೋರ್‍ ನ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಇದೇ ಡಿ.26ರ ರೊಳಗೆ ಸಲ್ಲಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕೃತಿಕ ಸಮಿತಿಯಿಂದ ಆಯ್ಕೆಯಾದ ಕಲಾತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top