ಕಲ್ಲಡ್ಕ: ಮೂರು ಕಾರುಗಳ ನಡುವೆ ಸರಣಿ ಅಪಘಾತ ► ಇಬ್ಬರಿಗೆ ಗಾಯ



(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.26. ಸ್ವಿಫ್ಟ್, ಇಂಡಿಕಾ ಮತ್ತು ವ್ಯಾಗನಾರ್ ಕಾರುಗಳ ನಡುವೆ ಸರಣಿ ಅಪಘಾತವಾಗಿ ಇಬ್ಬರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ನರಹರಿ ಪರ್ವತದ ಬಳಿ ಭಾನುವಾರ ಸಂಜೆ ನಡೆದಿದೆ.







ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಾಣಿ ಕಡೆಗೆ ತೆರಳುತ್ತಿದ್ದ ಇಂಡಿಕಾ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಇದೇ ವೇಳೆ ಇಂಡಿಕಾ ಕಾರಿನ ಹಿಂದಿನಿಂದ ಬರುತ್ತಿದ್ದ ವ್ಯಾಗನಾರ್ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಸ್ವಿಫ್ಟ್ ಹಾಗೂ ಇಂಡಿಕಾ ಕಾರುಗಳಿಗೆ ಢಿಕ್ಕಿಯಾಗಿ ಮಗುಚಿ ಬಿದ್ದಿದೆ.






ಇದರಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಸಾಲುದ್ದದಲ್ಲಿ ನಿಂತಿದ್ದ ವಾಹನಗಳನ್ನು ನಿಭಾಯಿಸಲು ಬಂಟ್ವಾಳ ಸಂಚಾರಿ ಪೊಲೀಸರು ಹರಸಾಹಸಪಟ್ಟರು. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top