ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com  ಮಣಿಪುರ , ಡಿ 21 :  ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಗಳು ನಿಯಂತ್ರಣ ಕಳೆದುಕೊಂಡು ಅಪಘಾತವಾದ ಭೀಕರ ಘಟನೆ ಮಣಿಪುರದ ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಂಗ್ ಗ್ರಾಮದ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಕನಿಷ್ಠ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ  ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವಿದ್ಯಾರ್ಥಿಗಳನ್ನು ಕರೆದು ಕೊಂಡು ಹೋಗುತ್ತಿದ್ದ  ಎರಡು ಬಸ್ ಗಳು ಯಾರಿಪೋಕ್ ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದು. ಈ ಬಸ್ಸುಗಳು ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್ ಕಡೆಗೆ ಹೋಗುತ್ತಿದ್ದವು ಎನ್ನಲಾಗಿದೆ. ವರದಿಗಳ ಪ್ರಕಾರ, ಅಪಘಾತದಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಅಲ್ಪಾವಧಿ ಟೆಂಡರ್ ಆಹ್ವಾನ ➤ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು

error: Content is protected !!
Scroll to Top