ಸಿಸಿಬಿ ಪೊಲೀಸರ ದಾಳಿ  ➤ ಫಾರ್ಮ್ ನಲ್ಲಿ 29 ವನ್ಯಜೀವಿಗಳು ಪತ್ತೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಎಸ್​.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್​ನಲ್ಲಿ ವನ್ಯ‌ಜೀವಿಗಳು ಪತ್ತೆಯಾಗಿದ್ದು, ದಾವಣಗೆರೆ ನಗರದ ಬಂಬೂ ಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​ ಮೇಲೆ ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿದ್ದು,  ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಬ್ಬಾಳದಲ್ಲಿ ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡಲು ಬಂದಿದ್ದ ಸೆಂಥಿಲ್‌ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆಗೆ ಒಳಪಡಿಸಿದ್ದರು. ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಜೀವಂತ ವನ್ಯಪ್ರಾಣಿಗಳು ಸಿಕ್ಕಿವೆ’ ಎಂದು ತಿಳಿದುಬಂದಿದೆ.  ಫಾರ್ಮ್‌ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಮುಂದಿನ ಕ್ರಮಕ್ಕೆ ಪ್ರಕರಣವನ್ನು ಸ್ಥಳೀಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎನ್ನಲಾಗಿದೆ.

Also Read  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ►ಗ್ರಾಮಾಭಿವೃದ್ಧಿ ಯೋಜನೆ ಸ್ವಾವಲಂಬಿ ಬದುಕಿಗೆ ಪ್ರೇರಣೆ - ಬಾಲಕೃಷ್ಣ ಬಳ್ಳೇರಿ

 

 

 

error: Content is protected !!
Scroll to Top