(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಟಿಕೆಟ್ ಪಡೆಯದೇ ಸಂಚರಿಸುವ ಪ್ರಯಾಣಿಕರಿಂದ 6,56,030 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ನವೆಂಬರ್-2022 ರ ಮಾಹೆಯಲ್ಲಿ ಒಟ್ಟು 15,530 ಟ್ರಿಪ್ ಗಳನ್ನು ತಪಾಸಣೆ ನಡೆಸಿ, 3326 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ ಒಟ್ಟು ರೂ.6,32,030 ದಂಡ ವಸೂಲಿ ಮಾಡಿ ನಿರ್ವಾಹಕರ ವಿರುದ್ದ 1486 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.