(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ನೀಡಲು 2023ನೇ ಜನವರಿ 6ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಡಳಿಯ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಆಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು.
ದಾಖಲೆಗಳು:
ಅರ್ಜಿ ನಮೂನೆ, ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ, ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿದವಿತ್, ಫಲಾನುಭವಿಯು ಪ್ರಸ್ತುತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಹಾಗೂ ಸದಸ್ಯತ್ವದ ನೈಜತೆಯ ಬಗ್ಗೆ ಸಂಬಂಧಪಟ್ಟ ಹಿರಿಯ, ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನಾ ವರದಿ ಲಗತ್ತಿಸಿರಬೇಕು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿ ಕಚೇರಿ, ಹಿರಿಯ ಕಾರ್ಮಿಕ ನಿರೀಕ್ಷಕರು, ದೂ.ಸಂ:0824-2433132, 0824-2435343 ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.