ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 22. ಮನೆಯೊಂದರಲ್ಲಿ ನಡೆದ ಲಕ್ಷಾಂತರ ರೂ ಮೌಲ್ಯದ ನಗದನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ ಕಾರ್ಕಳ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ.

ಬಂಧಿತರನ್ನು ಬಂಟ್ವಾಳ ತಾಲೂಕು ಕಾಂತರಬೆಟ್ಟು, ಅರಂಬೋಡಿ ಗ್ರಾಮದ ನಿವಾಸಿ ಪ್ರಸಾದ್(34) ಹಾಗೂ ಕಾರ್ಕಳ ತಾಲೂಕಿನ ಕಲ್ಯಾ ಗಗ್ರಾಮದ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಇವರು ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿ ಗೋದ್ರೇಜಿನ ಬೀಗ ಮುರಿದು 9,75,000 ರೂ. ಬೆಲೆಬಾಳುವ ಆಭರಣಗಳನ್ನು ಕಳವು ಮಾಡಿದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಕಾರ್ಕಳ ವೃತ್ತ ನಿರೀಕ್ಷಕರಾದ ಟಿ.ಡಿ.ನಾಗರಾಜ್ರವರ ತಂಡವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಚಿಯಾಗಿದ್ದಾರೆ.

Also Read 

error: Content is protected !!
Scroll to Top