ಕರ್ನಾಟಕದಲ್ಲಿ ಕೋವಿಡ್ ನಿಗಾ ಕುರಿತು ಮಹತ್ವದ ಸಭೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಕೋವಿಡ್‌ ಸೋಂಕು ಕುರಿತ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಚರ್ಚಿಸಲು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್‌ ಸೋಂಕನ್ನು ಯಾವ ರೀತಿ ನಿಯಂತ್ರಣ ಮಾಡಬೇಕು. ಯಾವ ರೀತಿಯ ಟೆಸ್ಟ್‌ಗಳನ್ನು ಹೆಚ್ಚಳ ಮಾಡಬೇಕು ಎನ್ನುವ ಕುರಿತು ಚರ್ಚಿಸಲು ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್‌ ಸೋಂಕು ಹರಡುವಿಕೆ ತಡೆಗಟ್ಟುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು ಎಂದರು.

Also Read  ಕಡಬ ಪರಿಸರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆ *➤ ಹಲವು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು ➤ ಅಪಾರ ಕೃಷಿ ನಾಶ, ಲಕ್ಷಾಂತರ ರೂ. ನಷ್ಟ

 

 

 

error: Content is protected !!
Scroll to Top