ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಜಪಾನ್‌, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ, ಜಪಾನ್‌ ಸೇರಿದಂತೆ ಹಲವೆಡೆ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಅದರಲ್ಲೂ ಚೀನಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಲಸಿಕಾಕರಣ ನೂರಕ್ಕೆ ನೂರರಷ್ಟು ಆಗಿದೆ. 3ನೇ ಡೋಸ್‌ ಕೊಡಲು ಹೆಚ್ಚಿನ ಒತ್ತು ನೀಡಲಾಗುವುದು. 3ನೇ ಡೋಸ್‌ ತೆಗೆದುಕೊಳ್ಳದವರ ಮೇಲೆ ನಿಗಾ ಇಡುತ್ತೇವೆ. ಮಕ್ಕಳಿಗೂ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

Also Read  ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ

 

error: Content is protected !!