ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಮುಂಬೈ , ಡಿ 22 :  ಕಿರುತೆರೆ ನಟಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

 

ಬಂಧಿತ ಆರೋಪಿಯನ್ನು ನವೀನ್ ಗಿರಿ ಎಂದು ಗುರುತಿಸಲಾಗಿದೆ.  ಆರೋಪಿಯ ವಿರುದ್ಧ 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ), 509, 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಐಪಿಸಿ ಮತ್ತು ಐಟಿ  ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ನವೀನ್ ವಾಟ್ಸ್ ಆಪ್ ಮೂಲಕ ಸೆಲೆಬ್ರಿಟಿಗಳು ಸೇರಿದಂತೆ ಪ್ರಭಾವಿಗಳಿಗೆ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಎಂದು ತಿಳಿದು ಬಂದಿದೆ.

error: Content is protected !!
Scroll to Top