3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಡಿ. 22. ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ.

ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. 7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ  ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು ಹಿಂತಿರುಗುತ್ತಿದ್ದಂತೆಯೇ ರೋಹಿಣಿ ಕೆರೆಗೆ ಹಾರಿ ದುರಂತ ಅಂತ್ಯ ಕಂಡಿದ್ದಾಳೆ ಸಾವಿಗೂ ಮುನ್ನ ಕೆರೆ ದಡದಲ್ಲಿ 1760 ರೂಪಾಯಿ, ಮೊಬೈಲ್ ಹಾಗೂ ಚಪ್ಪಲಿ ಬಿಟ್ಟು ಕೆರೆಗೆ ಹಾರಿದ್ದಾಳೆ ಎನ್ನಲಾಗಿದೆ.

Also Read  (ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಸ್ಟೇಷನ್ ಕಂಟ್ರೋಲರ್ /ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಮೇ 16,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 82,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. *ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಹುದ್ದೆಗಳಿಗೆ ಅರ್ಜಿ ಆಹ್ವಾನ.!*

 

 

 

 

 

error: Content is protected !!