ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಬೆಳಗಾವಿ , ಡಿ 22 :  ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಲಾಗಿದ್ದು, ಜ.12 ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಅವರು ರಾಷ್ಟ್ರೀಯ ಯುವಜನೋತ್ಸವದ  ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ.

Also Read  7ನೇ ವೇತನ ಮಧ್ಯಂತರ ವರದಿ ಪಡೆದು ವೇತನ ಮತ್ತು ಭತ್ಯೆಗಳ ಪರಿಷ್ಕರಣೆ     ➤  ಇಂದು ಸಿಎಂ ಬೊಮ್ಮಾಯಿ ಘೋಷಣೆ

ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರಿವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.

error: Content is protected !!
Scroll to Top