ಮಂಗಳೂರು ವಿವಿ ಫಲಿತಾಂಶ 10 ದಿನದೊಳಗೆ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಮಂಗಳೂರು ವಿವಿ ಫಲಿತಾಂಶ 10 ದಿನದೊಳಗೆ ಬಿಡುಗಡೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತನಾರಾಯಣ ಭರವಸೆ ನೀಡಿದ್ದಾರೆ.

ಈ ಕುರಿತು ಗುರುವಾರದಂದು ವಿರೋಧ ಪಕ್ಷದ ನಾಯಕ ಯು.ಟಿ ಖಾದರ್ ಅವರು, ಮಂಗಳೂರು ವಿವಿಯಲ್ಲಿ ಫಲಿತಾಂಶ ವಿಳಂಬದ ಕಾರಣ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದು, ಫಲಿತಾಂಶ ವಿಳಂಬದಿಂದ ಅಂಕಪಟ್ಟಿ ಬಾರದೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲಾಗದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ತಕ್ಷಣವೇ ವಿಳಂಬದ ಬಗ್ಗೆ ತನಿಖೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇನ್ನು ಹತ್ತು ದಿನಗಳೊಳಗೆ ಮಂಗಳೂರು ವಿವಿ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

Also Read  ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ      

 

 

error: Content is protected !!
Scroll to Top