(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡದ ಹಿರಿಯ ಸಾಹಿತಿ ಡಾ ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.
ಅನುವಾದ ಪ್ರಶಸ್ತಿಗೆ ಪದ್ಮರಾಜು ದಂಡಾವತಿ ಅವರು ಅನುವಾದಿಸಿದ ಸೀತಾ ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ. ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಸನ್ಮಾನ ಒಳಗೊಂಡಿದ್ದರೆ ಅನುವಾದ ಪ್ರಶಸ್ತಿ ಐವತ್ತು ಸಾವಿರ ರೂಪಾಯಿ ಹಾಗೂ ಸನ್ಮಾನ ಒಳಗೊಂಡಿರುತ್ತವೆ. ಪ್ರಶಸ್ತಿಗಳನ್ನು 2023 ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎನ್ನಲಾಗಿದೆ.