(ನ್ಯೂಸ್ ಕಡಬ) newskadaba.com ಮಂಗಳೂರು , ಡಿ 23 : ಯಕ್ಷಗಾನ ಕಲಾವಿದರರೊಬ್ಬರು ಯಕ್ಷಯಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತರನ್ನು ಗುರುವಪ್ಪ ಬಾಯಾರು (58) ಎಂದು ಗುರುತಿಸಲಾಗಿದೆ.
ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಅದರಲ್ಲಿ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಯಕ್ಷಗಾನ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಾಯಾಘಾತವಾಗಿ ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.