ಕೊರೋನಾ ಭೀತಿ- ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 23. ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಅವಧಿ ಪೂರ್ವ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ವಿಧಾನಸಭೆ ಚುನಾವಣೆ ಎದುರಿಸಲು ಸಜ್ಜಾಗಿ ಎಂಬ ಸಂದೇಶವನ್ನು ಸಿಎಂ ಬೊಮ್ಮಾಯಿ ಪೊಲೀಸ್ ಇಲಾಖೆಗೆ ರವಾನಿಸಿದ್ದಾರೆ ಎನ್ನಲಾಗಿದೆ.

ವಿಧಾನಸಭೆಯ ಅವಧಿ ಮೇ ತಿಂಗಳ ಎರಡನೇ ವಾರದ ತನಕ ಇದ್ದು, ಸಾಮಾನ್ಯವಾಗಿ ಎಪ್ರಿಲ್ 20 ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಕೊರೋನಾ ಭೀತಿ ಎದುರಾಗಿರುವುದರಿಂದ ಅವಧಿ ಪೂರ್ವ ಚುನಾವಣೆ ಬಗ್ಗೆ ಮಾತು ಕೇಳಿ ಬರುತ್ತಿದೆ ಎನ್ನಲಾಗಿದೆ.

Also Read  ಮತದಾರರಿಗೆ ಆಮಿಷ, ನಗದು, ಕುಕ್ಕರ್‌, ಹೆಲ್ಮೆಟ್‌, ದಿನಸಿ ಕಿಟ್‌ಗಳ ಜಪ್ತಿ..!

 

error: Content is protected !!
Scroll to Top