ಬೆಂಗಳೂರು : ಕೋವಿಡ್ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಸಭೆ        ➤  ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌                                                             

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23.  ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದ ಕೋವಿಡ್‌ ತಾಂತ್ರಿಕ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಸೋಂಕಿನ ಕುರಿತು ಆಗುತ್ತಿರುವ ಬೆಳವಣಿಗಳನ್ನು ಗಮನಿಸುತ್ತಿರುವ ಕೋವಿಡ್‌ ತಜ್ಞರು ಸಭೆ ನಡೆಸಿ, ಮುಖ್ಯಮಂತ್ರಿಗಳ ನೇತೃತ್ವದ ಕೊರೋನಾ ತಾಂತ್ರಿಕ ಸಮಿತಿಗೆ ಕೆಲವು ಶಿಫಾರಸುಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಅನುಗುಣವಾಗಿ ಮುಖ್ಯಮಂತ್ರಿಗಳ ನೇತೃತ್ವದ ಸಮಿತಿ ನಿರ್ಧಾರ ತೆಗೆದುಕೊಳ್ಳಲಿದೆ. ಬಳಿಕ ಆರೋಗ್ಯ ಇಲಾಖೆ  ಹಾಗೂ ಸರ್ಕಾರ ನೀಡುವ ಸಲಹೆ ಸೂಚನೆಗಳನ್ನು ಬಿಬಿಎಂಪಿ ಪಾಲನೆ ಮಾಡಲಿದೆ ಎಂದು ತಿಳಿಸಿದ್ದಾರೆ.

Also Read  ವಿಟ್ಲ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಬೆಂಗಳೂರಿಗೆ ಪ್ರತ್ಯೇಕವಾಗಿ ಯಾವುದೇ ಶಿಫಾರಸುಗಳನ್ನು ತಜ್ಞರು ಮಾಡಿಲ್ಲ. ಇಡೀ ರಾಜ್ಯಕ್ಕೆ ಅನುಗುಣವಾಗಿ ಶಿಫಾರಸು ಮಾಡಿದ್ದಾರೆ. ಸರ್ಕಾರವು ಸಹ ಇಡೀ ರಾಜ್ಯಕ್ಕೆ ಅನುಗುಣವಾಗಿ ಮಾರ್ಗಸೂಚಿ ನೀಡಲಿದ್ದು, ಎಲ್ಲಾ ಅಂಶಗಳನ್ನು ಚರ್ಚೆ ನಡೆಸಿ ತೀರ್ಮಾನ  ತೆಗೆದುಕೊಳ್ಳಲಿದೆ ಎಂದು ಹೇಳಿದರು. ಹೆಚ್ಚು ಜನದಟ್ಟಣೆ ಇರುವ ಜಾಗಗಳಿಂದ ಸಾರ್ವಜನಿಕರು ದೂರುವಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್‌ ಧರಿಸಬೇಕು. ಆಗಾಗ ಕೈ ತೊಳೆಯುವ ಅಭ್ಯಾಸವನ್ನು ಮತ್ತೆ ರೂಢಿಸಿಕೊಳ್ಳಬೇಕು ಎಂದು ವರದಿ ಪ್ರಕಟಣೆ ತಿಳಿಸಿದೆ.

 

 

error: Content is protected !!
Scroll to Top