ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ರಾಜಸ್ಥಾನ, ಡಿ.23.  ಕಾರೊಂದು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.  ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು, ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಮೃತರನ್ನು ಹವಾ ಸಿಂಗ್,  ಸಂದೀಪ್ ಸಿಂಗ್,  ಶೇರ್ ಸಿಂಗ್,  ಸತ್ವೀರ್ ಎಂದು ಗುರುತಿಸಲಾಗಿದೆ. ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದ ಟ್ರೇಲರ್‌ ಲಾರಿಗೆ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.  ಮೃತದೇಹಗಳನ್ನು ವಾಹನದಿಂದ ಹೊರತೆಗೆದು  ಆಂಬ್ಯುಲೆನ್ಸ್ ಸಹಾಯದಿಂದ ಮೃತದೇಹಗಳನ್ನು  ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

Scroll to Top