(ನ್ಯೂಸ್ ಕಡಬ) newskadaba.com ಸಾಗರ , ಡಿ 23 : ರಾಷ್ಟ್ರೀಯ ಹೆದ್ದಾರಿ 206ರ ಸಮೀಪ ಬೈಕೊಂದು ಅಪಘಾತಕ್ಕೀಡಾಗಿ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕೈರಾ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತ ವಿದ್ಯಾರ್ಥಿಯನ್ನು ಆನಂತಪುರ ಸಮೀಪದ ಯಡೆಹಳ್ಳಿಯ ನಿವಾಸಿಯಾದ ಎಲ್ಡ್ರನ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಈತ ಸಾಗರದ ಫಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಓದುತ್ತಿದ್ದ ಎನ್ನಲಾಗಿದೆ. ಅಪಘಾತ ಹೇಗೆ ಸಂಭವಿಸಿದೆ ಎಂದು ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಆನಂತಪುರದ ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದೆ.