ಮುಂದಿನ ವರ್ಷದಿಂದ ಹೆಣ್ಣುಮಕ್ಕಳ ಅತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್ ಪ್ರಾರಂಭ ➤ ಮುಖ್ಯಮಂತ್ರಿ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 23.  ಮುಂದಿನ ಶೈಕ್ಷಣಿಕ ವರ್ಷದಿಂದ  ಯೋಗದೊಂದಿಗೆ  ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾ ಜ ಬೊಮ್ಮಾಯಿ ತಿಳಿಸಿದರು.

ಅವರು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಮುಖ್ಯಮಂತ್ರಿ,  ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ.  ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ  ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳನ್ನು ಕೂಡ ಪಿಯುಸಿ ಹಂತದಿಂತ  ನಡೆಸಲಾಗುವುದು ಎಂದು ತಿಳಿಸಿದರು.  ಆತ್ಮರಕ್ಷಣೆ ಪ್ರತಿ ನಾಗರಿಕನಿಗೆ ಅಗತ್ಯ. ನಾನು  ಗೃಹ ಸಚಿವನಿದ್ದ ಸಂದರ್ಭದಲ್ಲಿ ಕೆಲವು ನಿರ್ಧಾರ ಗಳನ್ನು ತೆಗೆದುಕೊಂಡಿದ್ದು, ಆತ್ಮರಕ್ಷಣೆಗಾಗಿ ಕರಾಟೆ ತರಬೇತಿ ಯನ್ನು ಹೆಣ್ಣುಮಕ್ಕಳಿಗೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು.  ವಸತಿ ಶಿಕ್ಷಣ ಸಂಸ್ಥೆ ಇದನ್ನು ಅಳವಡಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಕಳೆದ ಒಂದು ವರ್ಷದಲ್ಲಿ ತರಬೇತಿ ನೀಡಿರುವುದು ಶ್ಲಾಘನೀಯ ಎಂದರು.

Also Read  ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಹಿನ್ನೆಲೆ ➤ ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

 

error: Content is protected !!
Scroll to Top