ಬೆಂಕಿ ತಗುಲಿ ಬಣವೆ ಭಸ್ಮ

(ನ್ಯೂಸ್ ಕಡಬ) newskadaba.com  ನಂಗಲಿ (ಮುಳಬಾಗಿಲು) , ಡಿ 23 : ಭತ್ತದ ಹುಲ್ಲಿನ ಬಣವೆಗೆ ಬೆಂಕಿ ಹತ್ತಿ ಸುಟ್ಟು ಭಸ್ಮವಾದ ಘಟನೆ  ಮುಳಬಾಗಿಲು ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಚಿನ್ನಹಳ್ಳಿ ಗ್ರಾಮದ ಕೆಂಪಣ್ಣ ಎಂಬುವರಿಗೆ ಸೇರಿದ ಬಣವೆ ಸಂಪೂರ್ಣ ಭಸ್ಮವಾಗಿದೆ. ಗ್ರಾಮ ಹೊರವಲಯದಲ್ಲಿ ಬಣವೆ ಹಾಕಲಾಗಿತ್ತು. ಕಿಡಿಗೇಡಿಗಳ ಕೃತ್ಯದಿಂದ ಸುಮಾರು ರೂ.3 ಲಕ್ಷ ನಷ್ಟವಾಗಿದೆ ಎನ್ನಲಾಗಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ  ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಸಂತ್ರಸ್ತ ಕುಟುಂಬಕ್ಕೆ ಕಂದಾಯ ಇಲಾಖೆಯು ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Scroll to Top