ವಿಟ್ಲ: ಸೊಸೈಟಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ► ಕಳ್ಳತನಕ್ಕೆ ವಿಫಲ ಯತ್ನ

(ನ್ಯೂಸ್ ಕಡಬ) newskadaba.com ವಿಟ್ಲ, ನ.28. ನಗರದ ಹೊರವಲಯದ ಮಂಗಳಪದವಿನ ಸೊಸೈಟಿಯೊಂದರ ಶಟರ್ ಮುರಿದು ಒಳನುಗ್ಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರದಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.


ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳಪದವು ಶಾಖೆಯ ಒಳ ನುಗ್ಗಿದ ಕಳ್ಳರು ಬ್ಯಾಂಕಿನೊಳಗಿದ್ದ ಕ್ಯಾಷ್ ಡ್ರಾವರ್, ಕಪಾಟನ್ನು ಮುರಿದು ಹಣಕ್ಕಾಗಿ ಜಾಲಾಡಿದ್ದು, ಬ್ಯಾಂಕ್ ಲಾಕರನ್ನು ಮುರಿಯಲು ವಿಫಲ ಯತ್ನ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿರುವ ಸೊಸೈಟಿಗೆ ಕಳ್ಳರು ನುಗ್ಗಿರುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

Also Read  ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

error: Content is protected !!
Scroll to Top