ಸುದ್ದಿ ಬಿಡುಗಡೆಯ ಸಂಪಾದಕರಿಗೆ ‘ಮಾಧ್ಯಮ ವಾರ್ಷಿಕ ಪ್ರಶಸ್ತಿ’ ► 40 ಮಂದಿ ಪತ್ರಕರ್ತರಿಗೆ ಒಳಿದು ಬಂತು ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.28. ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಅಕಾಡಮಿಯು 2017ನೆ ಸಾಲಿನ “ಮಾಧ್ಯಮ ವಾರ್ಷಿಕ ಪ್ರಶಸ್ತಿ”ಗೆ ರಾಜ್ಯದ 40 ಪತ್ರಕರ್ತರನ್ನು ಆಯ್ಕೆ ಮಾಡಿದ್ದು, ಈ‌ ಸಾಲಿನಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕ ಡಾ. ಯು.ಪಿ. ಶಿವಾನಂದ ರವರನ್ನು ಪ್ರಶಸ್ತಿ ಅರಸಿ ಬಂದಿದೆ.

ಪ್ರಶಸ್ತಿ ಪುರಸ್ಕೃತರಿಗೆ 20 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪ್ರಶಸ್ತಿ ಪ್ರಧಾನ‌ ಮಾಡಲಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡಮಿಯ ಅಧ್ಯಕ್ಷ ಎಂ. ಸಿದ್ದರಾಜು ತಿಳಿಸಿದ್ದಾರೆ.

Also Read  ಇಬ್ಬರು ಮಕ್ಕಳ ಮುಂದೆಯೇ ತಂದೆಯ ಭೀಕರ ಕೊಲೆ..!

error: Content is protected !!
Scroll to Top