ಹಾಸನ: ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ ➤ 7 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಡಿ. 23. ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ಸೊಂದು ರಸ್ತೆ ಬದಿ ಉರುಳಿಬಿದ್ದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುವೆಂಪುನಗರ ಬಳಿ ನಡೆದಿದೆ.

 

ಕನಕಪುರದಿಂದ ಖಾಸಗಿ ಬಸ್‌ನಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಬಸ್‌ ಪಲ್ಟಿಯಾಗಿದೆ. ಗಾಯಾಳುಗಳಿಗೆ ಹಾಸನ ಮತ್ತು ಬೇಲೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತ ನಡೆದ ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group