ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24.. ಚೀನಾದಲ್ಲಿ ಕೊರೊನಾ ಮತ್ತೆ ಆರ್ಭಟ ಹೆಚ್ಚಾಗುತ್ತಿದ್ದಂತೆ ಕರುನಾಡಿನಲ್ಲೂ ಆತಂಕ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಹಲವು ನಿರ್ಧಾರ ಜಾರಿಗೆ ತಂದಿದ್ದು, ಈ ಮೂಲಕ ಬಿಎಂಟಿಸಿ ಬಸ್​ ಹತ್ತ ಬೇಕು ಅಂದ್ರೆ ಮಾಸ್ಕ್ ಕಡ್ಡಾಯವಾಗಿ ಬೇಕು, ಮಾರ್ಷಲ್​ಗಳು ರಸ್ತೆಗೆ ಇಳಿದಿದ್ದು ನಿಯಮ ಪಾಲಿಸಿಲ್ಲ ಅಂದ್ರೆ ಜೇಬಿಗೆ ದಂಡದ ಬರೆ ಬೀಳಲಿದೆ.

ಕೋವಿಡ್‌ ಮಹಾಮಾರಿ ಸೋಂಕು ಮತ್ತೆ ತೀವ್ರವಾಗುವ ಭೀತಿ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್‌.ಸತ್ಯವತಿ, ಮಾಸ್ಕ್‌ ಹಾಕಿಕೊಳ್ಳದ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿ ಜಾಗೃತಿ ಮೂಡಿಸಬೇಕು. ಸಂಸ್ಥೆಯ ಎಲ್ಲ ವರ್ಗದ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Also Read  ಅಪಾರ ಸಾಲ ಮಾಡಿಕೊಂಡಿದ್ದ ಯುವ ರೈತ ಆತ್ಮಹತ್ಯೆಗೆ ಶರಣು..!        

 

 

error: Content is protected !!
Scroll to Top