(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 24. ಪಾಕಿಸ್ತಾನದಿಂದ ಅಕ್ರಮವಾಗಿ ಮಾದಕ ದ್ರವ್ಯ ಸರಬರಾಜು ಮಾಡುತ್ತಿದ್ದ ಬೃಹತ್ ಜಾಲವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭೇದಿಸಿದ್ದು, ಐವರು ಪೊಲೀಸರು ಸೇರಿ 17 ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಗಡಿ ಮೂಲಕ ಮಾದಕ ದ್ರವ್ಯ ಸಾಗಿಸುತ್ತಿದ್ದ ಜಾಲವನ್ನು ಪತ್ತೆ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ವಿವಿಧ ತಂಡಗಳಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡವು ಮಾದಕ ದ್ರವ್ಯ ಸರಬರಾಜು ಮಾಡುತ್ತಿದ್ದವರ ಹೆಡೆಮುರಿ ಕಟ್ಟಿದೆ. ಮಾದಕ ದ್ರವ್ಯ ಸಾಗಣೆ ಜಾಲದಲ್ಲಿ ರಾಜಕಾರಣಿಗಳು, ಗುತ್ತಿಗೆದಾರರು, ಕಿರಾಣಿ ಅಂಗಡಿ ಮಾಲೀಕರು ಭಾಗಿಯಾರುವ ಸುಳಿವು ಸಿಕ್ಕಿರುವ ಹಿನ್ನೆಲೆ. ಕಳ್ಳ ಸಾಗಣೆಗೆ ಸಹಕಾರ ನೀಡುತ್ತಿದ್ದ ಕೋಳಿ ಫಾರಂ ಅಂಗಡಿ ಮಾಲೀಕ ಮೊಹಮ್ಮದ್ ವಾಸಿಮ್ ನಜರ್ ಎಂಬಾತನ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಮನೆಯಲ್ಲಿದ್ದ ಅಪಾರ ಪ್ರಮಾಣದ ಮಾದಕ ದ್ರವ್ಯವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.