ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಪ್ರಾಧ್ಯಾಪಕ ಅಮಾನತು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 23. ಲೈಂಗಿಕ ಕಿರುಕುಳ ಆರೋಪದ ಮೇಲೆ ಇಲ್ಲಿನ ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್‌ನ ಇಂಗ್ಲೀಷ್ ಪ್ರೊಫೆಸರ್ ಡಾ. ಚಾಂದ್‌ ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆದೇಶ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ವಿಶ್ವವಿದ್ಯಾಲದಯ ರಿಜಿಸ್ಟರ್ ಅವರು ಈ ಆದೇಶವನ್ನು ಜಾರಿ ಮಾಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಕಾಯ್ದೆ ಮತ್ತು ಕಾನೂನಾತ್ಮಕವಾಗಿ ಪಿಎಚ್‌ಡಿ ವಿದ್ಯಾರ್ಥಿನಿ ಸಲ್ಲಿಸಿದ್ದ ಲೈಂಗಿಕ ಕಿರುಕುಳದ ಲಿಖಿತ ಆರೋಪದ ಹಿನ್ನೆಲೆ ಸುದೀರ್ಘ ವಿಚಾರಣೆ ನಡೆಸಿ, ಸಮಿತಿ ಸಲ್ಲಿಸಿದ ವರದಿಯನ್ನು ಸಿಂಡಿಕೇಟ್ ಸಭೆಯ ನಿರ್ಣಯದ ಪ್ರಕಾರ ಡಾ. ಚಾಂದ್‌ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Also Read  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಲಾರಿ

 

error: Content is protected !!
Scroll to Top