(ನ್ಯೂಸ್ ಕಡಬ) newskadaba. com ನವದೆಹಲಿ, ಡಿ. 24. ಐಸಿಐಸಿಐ ಬ್ಯಾಂಕ್ ನಿಂದ ಮಂಜೂರಾದ ಸಾಲ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿದೆ.
ವಿಡಿಯೊಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪ ಇವರ ಮೇಲಿದ್ದು, ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಕೊಚ್ಚರ್ ಮತ್ತು ವಿಡಿಯೊಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. 2020 ರಲ್ಲಿ ಚಂದಾ ಕೊಚ್ಚರ್ ಐಸಿಐಸಿಐ ಬ್ಯಾಂಕ್ ಎಂ.ಡಿ ಮತ್ತು ಸಿಇಒ ಆಗಿದ್ದ ವೇಳೆ ತಮ್ಮ ಪತಿಗೆ ಕೋಟ್ಯಂತರ ರೂಪಾಯಿಗಳ ಸಾಲ ನೀಡಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದರು. ಈ ಸಂಬಂಧ ಇಡಿ ಚಂದಾ ಕೊಚ್ಚಾರ್ ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.