ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..!

(ನ್ಯೂಸ್ ಕಡಬ) newskadaba.com ದಾವಣಗೆರೆ. ಡಿ. 24. ವ್ಯಕ್ತಿಯೋರ್ವ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ನಂತರ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಕೊಲೆಯಾದವರನ್ನು ಚಾಂದ್ ಸುಲ್ತಾನ(28) ಎಂದು ಗುರುತಿಸಲಾಗಿದೆ. ಇವರು ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ ಹರಿತವಾದ ಆಯುಧದಿಂದ ಆಕೆಯ ಕತ್ತು ಸೀಳಿದ್ದಾನೆ. ಈ ವೇಳೆ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ನಂತರ ಸ್ಥಳದಿಂದ ಪರಾರಿಯಾಗಿದ್ದ ಸಾದತ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ. ಸುಲ್ತಾನಾ ಹರಿಹರದ ನಿವಾಸಿಯಾಗಿದ್ದ ಅಯೂಬ್ ಎಂಬವರೊಂದಿಗೆ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಮದುವೆಯಾಗಬೇಕಿತ್ತು ಎಂದು ಮೂಲಗಳು ತಿಳಿಸಿವೆ.

Also Read  ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!    

error: Content is protected !!
Scroll to Top