ಕೋವಿಡ್ ಭೀತಿ- 24 ಗಂಟೆಗಳ ಅವಧಿಯಲ್ಲಿ 201 ಹೊಸ ಪ್ರಕರಣಗಳು ಪತ್ತೆ   ➤ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ                       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,397ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಬ್ಬರು ಸೇರಿದಂತೆ ಈವರೆಗೂ ದೇಶದಲ್ಲಿ 5,30,691 ಜನರು ಕೋವಿಡ್‌ ನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.15ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.14ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ. 24 ಗಂಟೆಗಳ ಅವಧಿಯಲ್ಲಿ 1,36,315 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈವರೆಗೂ 90.97 ಕೋಟಿ ಜನರಿಗೆ ಕೊರೊನಾ ವೈರಸ್ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ ಎನ್ನಲಾಗಿದೆ.

Also Read  ಯಡಿಯೂರಪ್ಪ ಪುತ್ರ ರಾಘವೇಂದ್ರರ ಕಾರು ಬೈಕಿಗೆ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top