ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಕಡ್ಡಾಯ   ➤ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ                                                 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ಜಾಗತಿಕ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಭಾರತಕ್ಕೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿರುವುದು ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದ್ದು, ಕೋವಿಡ್‌ ಲಕ್ಷಣಗಳು ಕಂಡುಬಂದರೆ ಕೂಡಲೇ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಇದಲ್ಲದೆ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ನಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ಘೋಷಿಸಲು ಏರ್ ಸುವಿಧಾ ಫಾರ್ಮ್ ಭರ್ತಿ ಮಾಡುವುದು ಕಡ್ಡಾಯವಾಗಿದೆ. ಇದಲ್ಲದೇ ಭಾರತದಲ್ಲಿ ಬೂಸ್ಟರ್ ಡೋಸ್ ಲಸಿಕೀಕರಣಕ್ಕೆ ಒತ್ತು ನೀಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದ್ದು, ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವುದು ಸೇರಿ ಕೋವಿಡ್‌ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಜ್ಞರು ನಾಗರಿಕರಿಗೆ ಸಲಹೆ ನೀಡಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ವುಮೆನ್ಸ್‌ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೋ ಲಾಂಚ್

error: Content is protected !!
Scroll to Top