ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಅಂಕೋಲಾ, ಡಿ. 24. ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸಂಪೂರ್ಣ ಸುಟ್ಟ ಭಸ್ಮವಾದ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಹುಬ್ಬಳ್ಳಿಯಿಂದ ಆಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೆದ್ದಾರಿ ಮೂಲಕ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಲಾರಿಯಲ್ಲಿ ರಾಸಾಯನಿಕ ವಸ್ತುವನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ತಿಳಿದಿಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಲು ಹರಸಾಹಸಪಟ್ಟರು. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top