ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇದೇ ಡಿ. 21 ರಿಂದ 27ರವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಸುಮಾರು 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ.

ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕ.ರ.ಸಾ.ನಿಗಮ, ಕ.ಕ.ರ.ಸಾ. ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27 ರಂದು ಕಾರ್ಯಕ್ರಮ ಮುಕ್ತಾಯಗೊಂಡು ಹಿಂದಿರುಗುವ ವೇಳೆಗೆ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲ್ವೇ ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ. ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ. 26 ರಿಂದ 28ರ ವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕ.ರಾ.ರ.ಸಾ.ನಿಗಮ ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಗುತ್ತಿಗೆ ಆಧಾರದಲ್ಲಿ ವೆನ್‍ಲಾಕ್‍ನಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ

 

 

error: Content is protected !!
Scroll to Top