ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ  

(ನ್ಯೂಸ್ ಕಡಬ) newskadaba.com ಸುರತ್ಕಲ್, ಡಿ. 24. ಕಂಟೈನರ್ ಲಾರಿ ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಹಾಗೂ ಓರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗೊಂಡ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ವರದಿಯಾಗಿದೆ.

 

ಮಂಗಳೂರು ಕಡೆಯಿಂದ ಸುರತ್ಕಲ್ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದ್ದರಿಂದ ಅತಿಯಾದ ವೇಗದಲ್ಲಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ತಿರುಗಿ, ಲಾರಿ ಡಿವೈಡರ್ ಏರಿಕೊಂಡು ಎದುರಿನಿಂದ ಬರುತ್ತಿದ್ದ ಒಂದು ಸ್ಕೂಟಿ ಮತ್ತು ಒಂದು ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಬೈಕ್ ಮತ್ತು ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ತಕ್ಷಣವೇ ಸಾರ್ವಜನಿಕರು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Also Read  ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..!

 

 

error: Content is protected !!
Scroll to Top