ಈದ್ ಮೀಲಾದ್ ಪ್ರಯುಕ್ತ ದ.ಕ., ಉಡುಪಿ ಜಿಲ್ಲೆಗಳಲ್ಲಿ ಡಿ.01. ರಂದು ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.29. ಈದ್ ಮಿಲಾದ್ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಡಿ.1ರಂದು ರಜೆ ಘೋಷಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.

ಮೀಲಾದುನ್ನಬಿ ಆಚರಣೆಗೆ ಡಿ.02 ರಂದು ಸರಕಾರಿ ರಜೆ ಘೋಷಿಸಿ ರಾಜ್ಯ ಸರಕಾರ ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೀಲಾದುನ್ನಬಿಯನ್ನು ಮುಸ್ಲಿಮರು ಡಿ.01 ರಂದು ಆಚರಿಸುತ್ತಿರುವುದರಿಂದ ಅಂದೇ ಸರಕಾರಿ ರಜೆ ಘೋಷಿಸುವಂತೆ ಆಹಾರ ಸಚಿವ ಯು.ಟಿ.ಖಾದರ್ ಅವರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ ಪರಿಣಾಮ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಡಿ.01. ರಂದು ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ.

Also Read  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವ - ಕಡಬ ತಹಶೀಲ್ದಾರರ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

error: Content is protected !!
Scroll to Top