8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್                    

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 24. 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಬಾಲಕಿಯ ದೇಹದಲ್ಲಿ ಆದ ಬದಲಾವಣೆಗಳನ್ನು ಆಕೆಯ ಪೋಷಕರು ಗಮನಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಆರು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಕುಟುಂಬ ಸದಸ್ಯರ ಹಿಂದೇಟು ಮತ್ತು ಸಾಮಾಜಿಕ ಕಳಂಕದ ಭಯದಿಂದ ಬಾಲಕಿ ಘಟನೆಯ ಬಗ್ಗೆ ಯಾವುದೇ ವಿವರವನ್ನು ಹಂಚಿಕೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಪೋಷಕರು ನೀಡಿದ ಸುಳಿವಿನ ಪ್ರಕಾರ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Also Read  ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ

 

 

error: Content is protected !!
Scroll to Top