ಡಿ. 28: ಖೇಲೋ ಇಂಡಿಯಾ ರಾಜ್ಯದ ಬಾಲಕಿಯರ ವಾಲಿಬಾಲ್ ತಂಡಕ್ಕೆ ಕ್ರೀಡಾಪಟುಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ಖೇಲೋ ಇಂಡಿಯಾ ಯೂಥ್ ಗೇಮ್ಸ್ 2023ರ ಜನವರಿ 30ರಿಂದ ಫೆಬ್ರವರಿ 11ರವರೆಗೆ ನವದೆಹಲಿ ಹಾಗೂ ಮಧ್ಯಪ್ರದೇಶದಲ್ಲಿ ಆಯೋಜಿಸಲಾಗುತ್ತಿದೆ. ಈ ಕ್ರೀಡಾಕೂಟಕ್ಕೆ ಕರ್ನಾಟಕದಿಂದ ಬಾಲಕಿಯರ ವಾಲಿಬಾಲ್ ತಂಡವನ್ನು ಆಯ್ಕೆಮಾಡಿ ಕಳುಹಿಸಲಾಗುವುದು. ತಂಡದ ಆಯ್ಕೆ ಪ್ರಕ್ರಿಯೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022ನೇ ಡಿಸೆಂಬರ್ 28ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಶ್ರೀ ಕಂಠೀರವ ಕ್ರೀಡಾಂಗಣದ ವಾಲಿಬಾಲ್ ಅಂಕಣದಲ್ಲಿ ನಡೆಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು 01-01-2004 ರಂದು ಅಥವಾ ನಂತರದಲ್ಲಿ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಅಶೋಕ್.ಕೆ.ಸಿ, ಹಿರಿಯ ವಾಲಿಬಾಲ್ ತರಬೇತುದಾರರು, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮೊಬೈಲ್ ಸಂಖ್ಯೆ: 9844123832 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top